ರಾಜ್ಯದ ಆಸ್ಪತ್ರೆ, ಶಾಲೆಗಳ ಆವರಣದಲ್ಲಿ ಜಂಕ್ ಫುಡ್ ನಿಷೇಧ- ಸಚಿವ ಯು.ಟಿ. ಖಾದರ್

ಮಂಗಳೂರು: ವಿದ್ಯಾರ್ಥಿಗಳ ಆರೋಗ್ಯದ ವಿಚಾರವಾಗಿ ಉತ್ತಮ ಗುಣಮಟ್ಟದ ಆಹಾರವನ್ನು ತಿನ್ನಬೇಕು ಜಂಕ್‌ ಫುಡ್‌ ನಿಂದ ಆರೋಗ್ಯ ಅದೆಗೆಡುತ್ತದೆ ಎನ್ನುವ ಉದ್ದೇಶ ದಿಂದ ಸಚಿವ ಯು.ಟಿ ಖಾದರ್‌ ಮಹತ್ತರ ನಿರ್ಧಾರವನ್ನು ಕೈಗೊಂಡಿದ್ದಾರೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕುಂದು ಕೊರತೆ, ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಗಳು, ಶಾಲೆಗಳ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಸೇವಿಸುವುದರಿಂದ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಇದರಿಂದ ಮೂತ್ರಪಿಂಡ, ಕ್ಯಾನ್ಸರ್ ಮೊದಲಾದ ಕಾಯಿಲೆ ಹೆಚ್ಚಾಗುತ್ತಿದೆ. ಇದಕ್ಕಾಗಿ ಆಸ್ಪತ್ರೆಗಳು ಮಾತ್ರವಲ್ಲ, ಶಾಲಾ ಕಾಲೇಜುಗಳ ಮುಂದೆ ಜಂಕ್‌ ಫುಡ್‌ ಮಾರಾಟ ಮಾಡುವಂತಿಲ್ಲ ಎಂದಿದ್ದಾರೆ.

ಮಾಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟ ಪರೀಕ್ಷಿಸಿ ಗುಣಮಟ್ಟ ರಹಿತ ಆಹಾರ ವಸ್ತುಗಳ ಮಾರಾಟ ನಿರ್ಬಂಧಿಸಲಾಗುವುದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಆಹಾರ ಮತ್ತು ಸುರಕ್ಷತಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲಾ ಆಸ್ಪತ್ರೆಗಳು, ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು, ಜಂಕ್ ಫುಡ್ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮ ಜಾರಿಗೆ ತರಳು ಚಿಂತನೆಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *