ಕರ್ನಾಟಕ ಹೈಕೋರ್ಟ್‌ : ರಾಜ್ಯದ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ರದ್ದು – ಹೊಸ ಪಟ್ಟಿಗೆ 3 ತಿಂಗಳ ಗಡುವು

ಕಲ್ಯಾಣ ಕರ್ನಾಟಕ (ಎಚ್‌ಕೆ) ಮತ್ತು ಉಳಿದ ಕರ್ನಾಟಕ (ನಾನ್‌ ಎಚ್‌ಕೆ) ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಕಾರಣವಾಗಿದ್ದ ಹಳೆಯ ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ. ಕಲ್ಯಾಣ ಕರ್ನಾಟಕ ಭಾಗದ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್‌ಟಿಆರ್‌) ನೇಮಕಾತಿಗೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್‌ಪೀಠವು ಮಹತ್ವದ ತೀರ್ಪು ನೀಡಿದೆ.

ನಿಯಮಾನುಸಾರ ಎಲ್ಲಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ, ಮೂರು ತಿಂಗಳೊಳಗೆ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಯಮೂರ್ತಿ ಆರ್‌. ದೇವದಾಸ್‌ ನೇತೃತ್ವದ ಪೀಠವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

2023 ಫೆ.1 ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಹೊರಡಿಸಿದ್ದ ಸುತ್ತೋಲೆಯು ಈ ಗೊಂದಲವನ್ನು ಮತ್ತಷ್ಟು ಹೆಚ್ಚಿಸಿತ್ತು. ಈ ನಿಯಮಗಳ ಅನ್ವಯ ಬಿಡುಗಡೆಯಾಗಿದ್ದ ಆಯ್ಕೆ ಪಟ್ಟಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ರಾಜ್ಯ ಸರಕಾರ 15,000 ಜಿಪಿಎಸ್‌ಟಿಆರ್‌ ಶಿಕ್ಷಕರ ನೇಮಕಾತಿಗೆ 2021 – 22ನೇ ಸಾಲಿನಲ್ಲಿಅಧಿಸೂಚನೆ ಹೊರಡಿಸಿತ್ತು. ಆದರೆ, ಸಂವಿಧಾನದ 371ಜೆ ವಿಧಿಯ ಅನ್ವಯ ಕಲ್ಯಾಣ ಕರ್ನಾಟಕ (ಎಚ್‌ಕೆ-ಸ್ಥಳೀಯ) ಮತ್ತು ಉಳಿದ ಕರ್ನಾಟಕ (ನಾನ್‌ ಎಚ್‌ಕೆ- ಸ್ಥಳೀಯೇತರ) ವೃಂದದ ಹುದ್ದೆಗಳ ಹಂಚಿಕೆ ಮತ್ತು ಮೀಸಲು ನಿಗದಿಯಲ್ಲಿ ಗೊಂದಲ ಉಂಟಾಗಿತ್ತು. ಈ ಕಾರಣಕ್ಕೆ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ಮೈಸೂರು ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್‌ ಭರತ್‌ಕುಮಾರ್‌ ಮತ್ತು ಕಾನೂನು ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿ ಎನ್‌.ವಿ ಭವಾನಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಸೆ.10 ರಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಆ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಅಧಿಸೂಚನೆ ಪ್ರಕಟಿಸಿದೆ. ಮೂವರು ಹೊಸ ನ್ಯಾಯಮೂರ್ತಿಗಳ ಸೇರ್ಪಡೆಯಿಂದ ಹೈಕೋರ್ಟ್‌ನ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿನ್ಯಾಯಮೂರ್ತಿಗಳ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇನ್ನೂ ಐದು ಹುದ್ದೆ ಖಾಲಿ ಇವೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others