ಪಿಜಿಸಿಇಟಿಗೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದ ಕೆಇಎ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ವೇಳಾ ಪಟ್ಟಿ ಪ್ರಕಟಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಆಪ್ಷನ್ಸ್ ದಾಖಲಿಸಲು ಸೆ.17ರವರೆಗೆ ಸಮಯ ನೀಡಿದೆ.

ಸೆ.17ರಂದು ಸಂಜೆ 6ರ ನಂತರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಅವಶ್ಯ ಇದ್ದಲ್ಲಿ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳುವುದಕ್ಕೆ ಅಥವಾ ಹೊಸದಾಗಿ ಹಾಕಿಕೊಳ್ಳುವುದಕ್ಕೆ ಹಾಗೂ ತೆಗೆದುಹಾಕುವುದಕ್ಕೆ ಸೆ.19ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಸೆ.19ರಂದು ಸಂಜೆ 5ಕ್ಕೆತಾತ್ಕಾಲಿಕ ಹಾಗೂ ಸೆ.21ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.22ರಿಂದ 24ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್ – 1 ಆಯ್ಕೆ ಮಾಡಿದವರು ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.26ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ವಿವರಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others