ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ರಾತ್ರಿ ಪ್ರಕಟಿಸಿದೆ.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಆಧಾರ ಸಮೇತ ಆ.24ರಂದು ಸಂಜೆ 4ಗಂಟೆಯೊಳಗೆ ಇ-ಮೇಲ್ ಮೂಲಕ (keauthority_ka@nic.in) ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಇದು ತಾತ್ಕಾಲಿಕ ಫಲಿತಾಂಶವಾಗಿರುವ ಕಾರಣ ಸೀಟು ಹಂಚಿಕೆಯಾಗಿರುವ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ
ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ. ಎಸ್ ಸಿ. (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಮೊದಲನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.





