KEAಯಿಂದ FDA, SDA ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

KEA

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರ (SDA) ನೇಮಕಾತಿಗೆ (FDA SDA Recruitments) ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ನ.30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಆ ಮೂಲಕ ಎಫ್ ಡಿಎ, ಎಸ್ ಡಿಎ ನೇಮಕಾತಿ(FDA SDA Recruitments) ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ದಿನಾಂಕದೊಳಗೆ ಶುಲ್ಕ ಕೂಡ ಪಾವತಿಸಬೇಕು. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ. 26ರೊಳಗೆ ಶುಲ್ಕ‌ ಪಾವತಿಸಲು ಅವಕಾಶ ನೀಡಲಾಗಿತ್ತು. ಆದರೆ ಅಭ್ಯರ್ಥಿಗಳ ಕೋರಿಕೆ ಮೇರೆಗೆ ನ. 30ರವರೆಗೆ ದಿನಾಂಕ ವಿಸ್ತರಿಸಿದ್ದು, ಅಷ್ಟರಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಅವರು ಸಲಹೆ‌ ನೀಡಿದ್ದಾರೆ.

💬 ಕಾಮೆಂಟ್ • Comments (0)

💬 ಓದುಗರ ಕಾಮೆಂಟ್‌ಗಳು • Reader Comments (0)

ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others