ಕೆಇಎಯಿಂದ 5,431 FDA, SDA ನೇಮಕಾತಿಗೆ ಅಧಿಸೂಚನೆ: ನ.26 ಅರ್ಜಿ ಸಲ್ಲಿಕೆಗೆ ಲಾಸ್ಟ್ ಡೇಟ್

ಬೆಂಗಳೂರು: ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಹಾಗೂ ದ್ವೀತಿಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಅಧಿಸೂಚನೆ ಹೊರಡಿಸಿದೆ.

ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರಂಭವಾಗಲಿದ್ದು ನವೆಂಬರ್ 25 ಕೊನೆ ದಿನ. ನ.26ರೊಳಗೆ ಶುಲ್ಕ ಪಾವತಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 ಪ್ರಥಮ ಹಾಗೂ 2,070 SDC ಹಾಗೂ‌ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 SDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಇವುಗಳಲ್ಲಿ ಪದವಿ ಹಾಗೂ ಪಿಯುಸಿ ಹಂತದ ಇತರ ಸಮಾನಾಂತರ ಹುದ್ದೆಗಳೂ ಸೇರಿವೆ ಎಂದು ಅವರು ವಿವರಿಸಿದ್ದಾರೆ.

ಪರೀಕ್ಷೆಗಳನ್ನು 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Share it :

Leave a Reply

Your email address will not be published. Required fields are marked *