ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಭಾರತದ ಸಂವಿಧಾನದ 317 (2) ನೇ ವಿಧಿಯ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಗೌರವಾನ್ವಿತ ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೆ ಈ ಅಮಾನತು ಜಾರಿಯಲ್ಲಿರಲಿದೆ.

ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಸಂಪುಟದ ಸಲಹೆಯಂತೆ ಕ್ರಮ ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 21376/2026ರಲ್ಲಿ ದಿನಾಂಕ 18-08-2026ರಂದು ನೀಡಿದ ಆದೇಶದಂತೆ ಹಾಗೂ ರಾಜ್ಯ ಸಚಿವ ಸಂಪುಟವು ದಿನಾಂಕ 21-08-2026ರಂದು ನೀಡಿದ ನೆರವು ಮತ್ತು ಸಲಹೆಯ ಮೇರೆಗೆ ರಾಜ್ಯಪಾಲರು ಈ ಅಮಾನತು ಆದೇಶ ಹೊರಡಿಸಿದ್ದಾರೆ.

ಹಿರಿಯ ಸದಸ್ಯರಿಗೆ ಪ್ರಭಾರ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಮುಂದಿನ ಆದೇಶ ಬರುವವರೆಗೆ ಕರ್ನಾಟಕ ಲೋಕಸೇವಾ ಆಯೋಗದ ಅತ್ಯಂತ ಹಿರಿಯ ಸದಸ್ಯರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ರಾಜ್ಯಪಾಲರು ನಿರ್ದೇಶನ ನೀಡಿದ್ದಾರೆ

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post