ಗ್ರಾಮೀಣ ಕುಟುಂಬಗಳಿಗೆ ಬೇಸಾಯದ ಸಮಯದಲ್ಲೂ ಕೃಷಿ ಉದ್ಯೋಗ ಲಭಿಸುವುದಿಲ್ಲ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಹಳ್ಳಿಯಲ್ಲಿ ಬರುವ ಕುಟುಂಬಗಳಿಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ನೂತನ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಿಯಿಂದರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾದರೂ ಗ್ರಾಮೀಣ ಜನರ, ಮಹಿಳೆಯರ, ವಂಚಿತರ, ದುರ್ಬಲರ ಹಿತದೃಷ್ಟಿಯಿಂದ ಜುಲೈ 1ರಿಂದಲೇ ಜಾರಿಗೆ ತರಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳನ್ನು ಬಿಟ್ಟು ಕಾಯಿದೆ ರೂಪಿಸಿದ ಬಗ್ಗೆಯೂ ಕರ್ನಾಟಕ ರಾಜ್ಯ ಸರ್ಕಾರದ ವಿರೋಧವಿದೆ. ಜೊತೆಗೆ ಕೇಂದ್ರ ಸರ್ಕಾರ ಹಂತ ಹಂತವಾಗಿ ಕನಿಷ್ಠ 80:20ರ ಅನುಪಾತದಲ್ಲಾದರೂ ರಾಜ್ಯಗಳ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಲಾಗುತ್ತಿದೆ ಎಂದರು. ಕೇಂದ್ರ ಸರ್ಕಾರ ವಿಬಿಜಿ ರಾಮ್ ಜಿ ಅಡಿ ರಾಜ್ಯಕ್ಕೆ 5709 ಕೋಟಿ ರೂ. ಹಂಚಿಕೆ ಮಾಡಿದೆ.

ಸಂಸತ್ತಿನಲ್ಲಿ ವಿಬಿಜಿ ರಾಮ್ ಜಿ ಕಾಯಿದೆ ತರುವ ಮುನ್ನ ಕೇಂದ್ರ ಸರ್ಕಾರ ರಾಜ್ಯಗಳ ಸಲಹೆ ಪಡೆಯಬೇಕಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತಿದೆ.ಗ್ರಾಮೀಣ ಜನರಿಗೆ ತೊಂದರೆ ಆಗದಂತೆ ಯೋಜನೆಗೆ ರಾಜ್ಯ ಸರ್ಕಾರದ ವತಿಯಿಂದ 3806 ಕೋಟಿ ರೂ. ಭರಿಸಬೇಕಾಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಅವರು ಸಮ್ಮತಿಸಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ಬೇಸಾಯದ ಸಮಯದಲ್ಲಿ 60 ದಿನಗಳ ಕಾಲ ಉದ್ಯೋಗ ನೀಡದಿರುವಂತೆ ಸೂಚಿಸಿದೆ. ಇದು ಗ್ರಾಮೀಣ ಕುಟುಂಬಗಳಿಗೆ ಮಾರಕವಾಗಿದೆ. ಕಾರಣ ಈಗ ಅತ್ಯಾಧುನಿಕ ಕೃಷಿ ಯಂತ್ರೋಪಕರಣ ಬಂದಿದ್ದು, ಗ್ರಾಮೀಣ ಕುಟುಂಬಗಳಿಗೆ ಬೇಸಾಯದ ಸಮಯದಲ್ಲೂ ಕೃಷಿ ಉದ್ಯೋಗ ಲಭಿಸುವುದಿಲ್ಲ. ಹೀಗಾಗಿ, ವಿಬಿಜಿ ರಾಮ್ ಜಿ ಅವರ ಅನ್ನವನ್ನು ಕಸಿಸಿಕೊಂಡಂತೆ ಮಾಡಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಆಕ್ಷೇಪಣೆ ವ್ಯಕ್ತಪಡಿಸಿದೆ. ಬರುವ 28ರಂದು ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರೊಂದಿಗೆ ಎಲ್ಲ ರಾಜ್ಯಗಳ ಸಚಿವರ ಸಭೆ ಇದ್ದು, ಈ ಸಭೆಯಲ್ಲಿ ಈ ಎಲ್ಲ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಈಗ 60:40ರ ಅನುಪಾತದಲ್ಲಿ ವೆಚ್ಚ ಭರಿಸಬೇಕಾಗಿದ್ದು, ರಾಜ್ಯಗಳ ಮೇಲೆ ಹೆಚ್ಚಿನ ಹೊರೆ ಆಗುತ್ತಿದೆ ಎಂದರು. 2006ರಿಂದ 2026ರಲ್ಲಿ ಇಲ್ಲಿಯವರೆಗೆ ಕೇಂದ್ರ ಸರ್ಕಾರ ನರೇಗಾ ಅಡಿಯಲ್ಲಿ 56492 ಕೋಟಿ ರೂ. ಭರಿಸಿದ್ದರೆ, ರಾಜ್ಯ ಸರ್ಕಾರ 4821 ಕೋಟಿ ಮಾತ್ರ ಭರಿಸಿ ಸುಮಾರು 182 ಕೋಟಿ ಮಾನವ ದಿನಗಳ ಉದ್ಯೋಗ ಒದಗಿಸಿತ್ತು. ಆದರೆ, ಈಗ ಒಂದೇ ವರ್ಷಕ್ಕೆ 3806 ಕೋಟಿ ರೂ. ವೆಚ್ಚ ಭರಿಸುವ ಸ್ಥಿತಿ ಬಂದಿದೆ. ಇದು ರಾಜ್ಯದ ಮೇಲೆ ಆಗುವ ದೊಡ್ಡ ಹೊರೆ. ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ 90:10 ಅನುಪಾತದಲ್ಲಿ ವೇತನ ಭರಿಸುತ್ತಿತ್ತು. ರಾಜ್ಯ ಸರ್ಕಾರ ಕೇವಲ 10ರಷ್ಟು ಹಣ ನೀಡುತ್ತಿತ್ತು. ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others