ಸಿಎಂ ಭೇಟಿ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರು: ಸಿಎಂ ನೀಡಿದ ಈ ಖಡಕ್ ಎಚ್ಚರಿಕೆ ಬೆನ್ನಲ್ಲೇ ಕೈಪಾಳಯದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡು, ಆಗಸ್ಟ್ 4ರ ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಹೇಳಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಶಾಸಕರ ಅಸಮಾಧಾನ ಶಮನ ಮಾಡಲು ತಮ್ಮದೇ ಹಳೆಯ ಉದಾಹರಣೆ ನೀಡಿದ ಡಿ.ಕೆ. ಶಿವಕುಮಾರ್, “ಹಿಂದೆ ಧರಂ ಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆ ವೇಳೆ ನನಗೂ ಮತ್ತು ಡಾ. ಜಿ. ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೂ ನಾವು ಧೃತಿಗೆಡದೆ ತಾಳ್ಮೆಯಿಂದ ಕಾದೆವು. ಆ ತಾಳ್ಮೆಯೇ ಇಂದು ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಹಾಗೂ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಶಾಸಕಾಂಗ ನಿಯಮಗಳ ಪ್ರಕಾರ ಶೇ. 15 ರಷ್ಟು ಜನರಿಗೆ ಮಾತ್ರ ಸಚಿವ ಸ್ಥಾನ ನೀಡಲು ಸಾಧ್ಯ. ಪಕ್ಷದಲ್ಲಿ ಎಂಎಲ್‌ಎ ಮತ್ತು ಎಂಎಲ್‌ಸಿಗಳಿಬ್ಬರೂ ಅರ್ಹರಿದ್ದಾರೆ. ಎಲ್ಲರೂ ತಾಳ್ಮೆಯಿಂದಿರಬೇಕು, ಮುಂದಿನ ದಿನಗಳಲ್ಲಿ ಖಂಡಿತ ಅವಕಾಶ ದೊರೆಯಲಿದೆ,” ಎಂದು ಸಮಾಧಾನಪಡಿಸುವ ಪ್ರಯತ್ನ ನಡೆಸಿದರು.

ಅಸಮಾಧಾನಿತರ ನಡೆ ಈಗೇನು?

ಸಂಪುಟ ವಿಸ್ತರಣೆ ಬೆನ್ನಲ್ಲೇ ಇಂಡಿ ಶಾಸಕ ಯಶವಂತರಾಯ್‌ ಗೌಡ ಪಾಟೀಲ್‌ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನೊಂದೆಡೆ, ಬೇಳೂರು ಗೋಪಾಲಕೃಷ್ಣ ಅವರು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದು ಸಿಎಂ ನೀಡಿದ ಎಚ್ಚರಿಕೆಯ ಸಂದೇಶ ಸಫಲವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ರಾಜೀನಾಮೆ ಅಸ್ತ್ರ ಬೀಸಿದ ಉಳಿದ ಬಂಡಾಯ ಶಾಸಕರು ಈಗ ತಣ್ಣಗಾಗುತ್ತಾರಾ ಅಥವಾ ತಮ್ಮ ಪಟ್ಟಿಗೆ ಬದ್ಧರಾಗಿರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others