ಕರ್ನಾಟಕ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ MLC ಪುಟ್ಟಣ್ಣ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ನೂತನ ಸಭಾಪತಿಯನ್ನು ನಿಯಮಾನುಸಾರ ಆಯ್ಕೆ ಮಾಡುವವರೆಗೆ, ಸಭಾಪತಿ ಸ್ಥಾನದ ಕರ್ತವ್ಯಗಳನ್ನು ನಿರ್ವಹಿಸಲು ವಿಧಾನ ಪರಿಷತ್ ಸದಸ್ಯರಾದ (MLC) ಪುಟ್ಟಣ್ಣ ಅವರನ್ನು ನೇಮಕ ಮಾಡಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಆದೇಶ ಹೊರಡಿಸಿದ್ದಾರೆ.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯವು ಹೊರಡಿಸಿರುವ ವಿಶೇಷ ರಾಜ್ಯಪತ್ರದ ಅಧಿಕೃತ ಅಧಿಸೂಚನೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ. ಭಾರತ ಸಂವಿಧಾನದ 184ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.

ದಿನಾಂಕ 07.08.2026 ರಿಂದ ಜಾರಿಗೆ ಬರುವಂತೆ ಪುಟ್ಟಣ್ಣ ಅವರು ತಾತ್ಕಾಲಿಕವಾಗಿ (ಹಾರಿಕೆ ಸಭಾಪತಿಯಾಗಿ) ಸಭಾಪತಿ ಹುದ್ದೆಯ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ರಾಜ್ಯಪಾಲರ ನಿರ್ದೇಶನದ ಮೇರೆಗೆ ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಈ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others