Narendra Modi: ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ- ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿ ಆದಂತಹ ಮೋಸಕ್ಕೆ ಯುವಕರು ಬೇಸತ್ತು ದೆಹಲಿಯಲ್ಲಿ ಜಂತರ್‌ ಮಂತರ್‌ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿ ಈಗ ತೀರ್ವ ವಿಕೋಪಕ್ಕ ತಲುಪಿದೆ. ಹೌದು ಪ್ರತಿಭಟನೆ ಮೇಲೆ ಪೊಲೀಸ್‌ ಲಾಠಿ ಚಾರ್ಜ್‌ ಮಾಡಿದ್ದಲ್ಲದೆ ಇದೀಗ ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

ಇದರ ಬೆನ್ನಲ್ಲೇ ಇದೀಗ ಪಿಎಂ ಮೋದಿ ಎಕ್ಸ್‌ ಖಾತೆಯ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಅತ್ಯಂತ ವೇಗವಾಗಿ ಮತ್ತು ಕಠಿಣವಾದ ಶಿಕ್ಷೆ ಸಿಗುವಂತೆ ಮಾಡಲು ‘ಫಾಸ್ಟ್-ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.ನಮ್ಮ ಯುವಜನತೆಯ ಭವಿಷ್ಯ ಮತ್ತು ಕ್ಷೇಮಾಭಿವೃದ್ಧಿಗಿಂತ ನಮಗೆ ಬೇರೇನೂ ಮುಖ್ಯವಲ್ಲ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ದೇಶಾದ್ಯಂತ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮೌನ ಮುರಿದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಮ್ಮ ಯುವಕರ ಹಾಗೂ ವಿದ್ಯಾರ್ಥಿಗಳ ಭವಿಷ್ಯ ಹಾಳುಮಾಡಲು ಯತ್ನಿಸುವ ಯಾವುದೇ ವ್ಯಕ್ತಿಯನ್ನು ಅಥವಾ ಶಕ್ತಿಯನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others