ಮಾಲೀಕರು ಆಸ್ತಿಯನ್ನು ಯಾವುದೇ ಅಡೆತಡೆಯಿಲ್ಲದೆ ಅನುಭವಿಸಬೇಕು: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಷ್ಟದಿಂದ ಗಳಿಸಿದ ಆಸ್ತಿಯ ಸಂಪೂರ್ಣ ಹಕ್ಕು ಅದರ ಮಾಲೀಕರಿಗೇ ಸೇರಬೇಕು. ಆಸ್ತಿ ಖರೀದಿ ಮತ್ತು ನಿರ್ವಹಣೆಯಲ್ಲಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಕಾಸಸೌಧದಲ್ಲಿ ನಡೆದ ‘ಕರ್ನಾಟಕ ಅಪಾರ್ಟ್‌ಮೆಂಟ್ ಕರಡು ವಿಧೇಯಕ 2026’ ಕುರಿತಾದ ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗಿನ ಮಹತ್ವದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಡಳಿತ ವಿಕೇಂದ್ರೀಕರಣ ಹಾಗೂ ಈಸ್ ಆಫ್ ಬಿಸಿನೆಸ್‌ಗಾಗಿ ನಗರದಲ್ಲಿ ಐದು ಪ್ರತ್ಯೇಕ ಕಾರ್ಪೊರೇಷನ್‌ಗಳನ್ನು ರಚಿಸಲಾಗಿದೆ. ಬೆಂಗಳೂರಿನಲ್ಲಿ ಹೈ-ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದು, ರಸ್ತೆ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಆಸ್ತಿ ಕೊಳ್ಳುವವರಿಗೆ ಅನುಕೂಲ ಕಲ್ಪಿಸಲು ಈ ನೂತನ ವಿಧೇಯಕ ತರಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಕಾನೂನಿನ ಚೌಕಟ್ಟಿನಲ್ಲಿರುವ ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಆಗಸ್ಟ್ 6 ರವರೆಗೆ ನಗರಾಭಿವೃದ್ಧಿ ಸಚಿವರಿಗೆ ಬರೆದು ಕಳುಹಿಸಬಹುದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇದರೊಂದಿಗೆ ಹಳೆಯ ಕಟ್ಟಡಗಳ ಮರು ಅಭಿವೃದ್ಧಿ ವಿಚಾರದಲ್ಲಿರುವ ಸಮಸ್ಯೆಗಳ ನಿವಾರಣೆಗೆ ಹಾಗೂ ಬಡವರು ಮನೆ ಕಟ್ಟಿಕೊಳ್ಳಲು ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಆನಗರದಲ್ಲಿ 132 ಕಿಲೋಮೀಟರ್ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದ್ದು, ಭೂಸ್ವಾಧೀನಕ್ಕಾಗಿ ರೈತರಿಗೆ ದೇಶದಲ್ಲೇ ಗರಿಷ್ಠ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

“ಜನರು ಕಷ್ಟಪಟ್ಟು ತಲೆಯ ಮೇಲೆ ಸೂರು ಕಟ್ಟಿಕೊಳ್ಳುವುದು ಸುಲಭದ ಮಾತಲ್ಲ. ಮಾಲೀಕರು ಆಸ್ತಿಯನ್ನು ಯಾವುದೇ ಅಡೆತಡೆಯಿಲ್ಲದೆ ಅನುಭವಿಸಬೇಕು ಎನ್ನುವುದು ನಮ್ಮ ಆಶಯ. ಇದಕ್ಕಾಗಿ ರಾಜ್ಯದಲ್ಲಿ ಮನೆ ಬಾಗಿಲಿಗೆ ಇ-ಖಾತಾ ನೀಡುವ ಕ್ರಾಂತಿಕಾರಿ ವ್ಯವಸ್ಥೆ ತರಲಾಗಿದೆ. ಬೆಂಗಳೂರಿನ 40 ಲಕ್ಷ ಆಸ್ತಿಗಳ ಪೈಕಿ ಈಗಾಗಲೇ 26 ಲಕ್ಷ ಆಸ್ತಿಗಳಿಗೆ ಇ-ಖಾತಾ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಹಾಗೂ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಸುಧಾರಣೆ ತರಲಾಗಿದ್ದು, ಕೆಲವು ಡೆವಲಪರ್‌ಗಳು ಸೃಷ್ಟಿಸುವ ಗೊಂದಲಗಳನ್ನು ಬಗೆಹರಿಸಿ, ಮಾಲೀಕರಿಗೆ ದಾಖಲಾತಿಗಳ ಸರಾಗ ವರ್ಗಾವಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *