ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಗಮನಹರಿಸಿ : ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಗಮನಹರಿಸುವ ಬದಲು, ಗೃಹ ಸಚಿವ ಪ್ರಿಯಾಂಕ್ ಅವರು ಕೇರಳಕ್ಕೆ ತೆರಳಿ ಮಸ್ಲಿಂ ಯುವಜನ ಲೀಗ್ ಸಭೆಯಲ್ಲಿ ಸುಳ್ಳು ನಿರೂಪಣೆಗಳನ್ನು ಹರಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂ.ಎಂ. ಕಲಬುರಗಿ ಅವರ ಹತ್ಯೆಗಳ ಹಿಂದೆ ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿರುವವರ ಕೈವಾಡವಿದೆ ಎಂಬ ಖರ್ಗೆ ಅವರ ಹೇಳಿಕೆ ಕುರಿತು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಗಳ ವಿಚಾರಣೆ ಮತ್ತು ತೀರ್ಪುಗಳನ್ನು ನ್ಯಾಯಾಲಯಗಳು ನಿರ್ಧರಿಸುತ್ತವೆಯೇ ಹೊರತು, ಚುನಾವಣಾ ಪ್ರಚಾರದ ವೇದಿಕೆಗಳಲ್ಲಿ ರಾಜಕೀಯ ನಾಯಕರು ನೀಡುವ ಹೇಳಿಕೆಗಳಲ್ಲ. ಗೌರಿ ಲಂಕೇಶ್ ಮತ್ತು ಎಂ.ಎಂ. ಕಲಬುರ್ಗಿ ಅವರ ಹತ್ಯೆಗಳು ಕ್ರಮವಾಗಿ 2015 ಮತ್ತು 2017ರಲ್ಲಿ ನಡೆದಿವೆ ಎಂದರು.

ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ಭೀಕರ ಹತ್ಯೆಗಳನ್ನು ತಡೆಯಲು ವಿಫಲವಾದ ಅದೇ ಕಾಂಗ್ರೆಸ್ ಪಕ್ಷ ಈಗ ನ್ಯಾಯ ಮತ್ತು ಹೊಣೆಗಾರಿಕೆಯ ಬಗ್ಗೆ ಇತರರಿಗೆ ಪಾಠ ಮಾಡಲು ಹೊರಟಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವರ ಸಾಂವಿಧಾನಿಕ ಜವಾಬ್ದಾರಿಗಳನ್ನು ನಿರ್ವಹಿಸುವ ಬದಲು, ತಾವೇ ನ್ಯಾಯಾಧೀಶರು, ತೀರ್ಪುಗಾರರು ಮತ್ತು ಶಿಕ್ಷೆ ವಿಧಿಸುವವರಂತೆ ವರ್ತಿಸಲು ಖರ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇತರರತ್ತ ಬೆರಳು ತೋರಿಸಿ ಕೇರಳದಲ್ಲಿ ರಾಜಕೀಯ ಭಾಷಣ ಮಾಡುವ ಮೊದಲು, ಕರ್ನಾಟಕದಲ್ಲಿ ತಮ್ಮ ಪಕ್ಷದ ವೈಫಲ್ಯಗಳಿಗೆ ಖರ್ಗೆ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇರಳದ ರಾಜಕೀಯ ಸಮಾವೇಶವೊಂದರಲ್ಲಿ ಮಾತನಾಡಿದ್ದ ಖರ್ಗೆ, ಗೌರಿ ಲಂಕೇಶ್ ಮತ್ತು ಎಂ.ಎಂ. ಕಲಬುರಗಿ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಆರು ತಿಂಗಳೊಳಗೆ ಜೈಲಿಗೆ ಕಳುಹಿಸುವುದಾಗಿ ಭರವಸೆ ನೀಡಿದ್ದರು.

ಈ ಹೇಳಿಕೆ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಅವರಿಗಿರುವ ಗೌರವದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

💬 ಕಾಮೆಂಟ್ • Comments (0)

💬 ಓದುಗರ ಕಾಮೆಂಟ್‌ಗಳು • Reader Comments (0)

ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)

Share it :

Leave a Reply

Your email address will not be published. Required fields are marked *