ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ದೇಶಕ್ಕೆ ನೋವನ್ನುಂಟು ಮಾಡಿದ್ದು, ಗಾನಕೋಗಿಲೆಯನ್ನು ನೆನೆದು ಇಡೀ ಸಂಗೀತ ಲೋಕವೇ ದುಖಃದಲ್ಲಿ ಮುಳಗಿದೆ. ಇತ್ತ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದು ಬೆಳಕಿಗೆ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಷ್ ಪೋಸ್ಟ್‌ನಲ್ಲಿ, ʼಎಸ್. ಜಾನಕಿ ಅಮ್ಮ ಅವರು, ಹಲವು ಭಾಷೆಗಳಲ್ಲಿ ಅವರು ಹಾಡಿದ ಗೀತೆಗಳು ತಲೆಮಾರುಗಳ ಮನಸ್ಸು ಗೆದ್ದಿವೆ. ಪ್ರತಿಯೊಂದು ಭಾವನೆಗೂ ತಮ್ಮ ಧ್ವನಿಯ ಮೂಲಕ ಜೀವ ತುಂಬಿದ್ದರು. ಅವರ ಹಾಡುಗಳು ಮುಂದಿನ ಪೀಳಿಗೆಯನ್ನೂ ಮೋಡಿ ಮಾಡುತ್ತಲೇ ಇರುತ್ತವೆ. ಅವರ ನಿಧನ ಸಂಗೀತ ಮತ್ತು ಸಂಸ್ಕೃತಿ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸಂಗೀತ ಲೋಕದ ಎಲ್ಲರಿಗೂ ನನ್ನ ಸಂತಾಪ. ಓಂ ಶಾಂತಿʼ ಎಂದು ಬರೆದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ʼಆರು ದಶಕಗಳಿಗೂ ಹೆಚ್ಚು ಕಾಲದ ಸಂಗೀತ ಪಯಣದಲ್ಲಿ ಸುಮಾರು 20 ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರ ಅಮೋಘ ಗಾಯನ ಹಲವು ತಲೆಮಾರುಗಳನ್ನು ರಂಜಿಸಿದೆ. ಜಾನಕಿ ಅಮ್ಮ ಅವರ ಅಗಲಿಕೆಯಿಂದ ಭಾರತ ಸಂಗೀತ ಲೋಕದ ಅಮೂಲ್ಯ ಧ್ವನಿಯನ್ನು ಕಳೆದುಕೊಂಡಿದೆ ಎಂದು ಬಣ್ಣಿಸಿದ್ದಾರೆ. ಅವರ ಸಂಗೀತ ಎಂದೆಂದಿಗೂ ಅಮೂಲ್ಯವಾಗಿ ಉಳಿಯಲಿದೆ. ಅವರ ಕುಟುಂಬ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನನ್ನ ಸಂತಾಪʼ ಎಂದು ಪೋಸ್ಟ್ ಮಾಡಿ ನೋವನ್ನು ವ್ಯಕ್ತಪಡಿಸಿದ್ದಾರೆ.
ಅವರ ಧ್ವನಿ ಸದಾ ಸಂಗೀತ ಪ್ರೇಮಿಗಳ ಹೃದಯದಲ್ಲಿ ಜೀವಂತವಾಗಿರಲಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಇತ್ತಜಾನಕಿ ಅಮ್ಮ ಅವರ ನಿಧನಕ್ಕೆ ದೇಶದ ಗಣ್ಯರು, ಸಂಗೀತ ಕ್ಷೇತ್ರದವರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿರುವುದು ಬೆಳಕಿಗೆ ಬಂದಿದೆ.





