ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ : ಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : ”ಮಹಾತ್ಮ ಗಾಂಧಿ ಅವರು ಉಳಿದಿದ್ದ ಮನೆಗೆ ಹೋಗಿದ್ದೆ ಅಲ್ಲಿ ಉಪಾಹಾರ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದು ಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ ಎಂದು ನಗುತ್ತಾ ಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ.

ಮಂಗಳೂರು ಬನ್ಸ್, ದೋಸೆ ಎಲ್ಲಾ ಸವಿದೆ. ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದರು.

ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೆ ಮೊದಲ ಬಾರಿ ನಡೆಯುವ ರಾಜ್ಯ ವಿಶೇಷ ಸಚಿವ ಸಂಪ ಟ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಆಗಮಿಸಿದ್ದಾರೆ. ಇಂದು ಬೆಳಗ್ಗೆ ಸಿಎಂ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಅಲ್ಲಿಂದ ಮಹಾತ್ಮ ಗಾಂಧಿ ಅವರು ಉಳಿದಿದ್ದ ಮನೆಗೆ ಭೇಟಿ ನೀಡಿ ಕೆಫೆಯಲ್ಲಿ ಮಂಗಳೂರು ಶೈಲಿಯ ಬೆಳಗಿನ ಉಪಹಾರ ಸವಿದರು. ಮಂಗಳೂರಿನ ಯುವ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್‌ಗಳೊಂದಿಗೆ ನಗರದ ಗಾಂಧಿ ಸ್ಕ್ವೇರ್ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಂವಾದ ನಡೆಸಿದರು.

ಯಾರೂ ಗಾಬರಿಯಾಗಬೇಕಿಲ್ಲ.ನಮಗೆ ಜನರ ಬದುಕು ಮುಖ್ಯ, ನಾವು ಜನರ ಬದುಕಿನ ಮೇಲೆ ರಾಜಕೀಯ ಮಾ ಡುವವರು, ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ.ಯಾರೂ ಗಾಬರಿಪಡಬೇಕಿಲ್ಲ ಎಲ್ಲರ ಚಿಂ ತನೆಯನ್ನೊಳಗೊಂಡು ನಮ್ಮ ಸರಕಾರ ಕೆಲಸ ಮಾಡಲಿದೆ ಎಂದು ಸಿಎಂ ಹೇಳಿದರು .

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು , ಸಿಎಂ ಭವ್ಯ ಸ್ವಾಗತಕ್ಕೆ ತಯಾರಿ ನಡೆಸಲಾಗಿದೆ. ಚೆಂಡೆ ಬ್ಯಾಂಡ್ ಸೆಟ್ ವಿವಿಧ ವೇಷಧಾರಿಗಳ ತಂಡಗಳು ಸಿದ್ದವಾಗಿ ಗಮನ ಸೆಳೆದೆವು .

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ನಾಯಕರ ದೃಢನಿಶ್ಚಯದಿಂದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 317ಜೆ ವಿಧಿಗೆ ತಿದ್ದುಪಡಿ ತರಲು ಸಾಧ್ಯವಾಯಿತು. ಇದರ ಅನುಷ್ಠಾನದ ಬಳಿಕ ಸಾವಿರಾರು ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಪ್ರವೇಶ ಪಡೆಯುತ್ತಿದ್ದು, ಉದ್ಯೋಗಾವಕಾಶಗಳನ್ನೂ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಜನರು ತಮ್ಮಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಸಂಘಟನೆಗಳು, ವ್ಯಕ್ತಿಗಳು ಮತ್ತು ರಾಜಕೀಯ ಪಕ್ಷಗಳನ್ನು ಮರೆಯುವುದಿಲ್ಲ. ಕೃತಜ್ಞತೆಯ ಸಂಕೇತವಾಗಿ 2023 ಮತ್ತು 2024ರ ಚುನಾವಣೆಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others