Prahlad Joshi: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ – ಈ ಸುಳ್ಳು ಸಂದೇಶವನ್ನು ನಂಬಬೇಡಿ: ಪ್ರಹ್ಲಾದ್ ಜೋಶಿ

ನವದೆಹಲಿ: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರವಾಗಿ ಇದೀಗ ಕೇಂದ್ರ ಸಚಿವ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನು ನಂಬಿ ಯಾರೂ ಮೋಸ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಯಾವುದೇ ಯೋಜನೆ ಬಗ್ಗೆ ಮಾಹಿತಿ ತಿಳಿಯಬೇಕಾದರೆ ಸಚಿವಾಲಯದ ಅಧಿಕೃತ ವೆಬ್‌ಸೈಟ್ ಹಾಗೂ ಪರಿಶೀಲಿತ ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿಯನ್ನಷ್ಟೇ ನಂಬಬೇಕು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರನ್ನು ದಾರಿ ತಪ್ಪಿಸುವ ಅಥವಾ ವಂಚಿಸುವ ಉದ್ದೇಶದಿಂದ ಕೆಲವರು ಸಚಿವಾಲಯದ ಹೆಸರಿನಲ್ಲಿ ಇಂತಹ ಫೇಕ್ ಮೆಸೇಜ್‌ಗಳನ್ನು ಹರಿಬಿಡುತ್ತಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂಥ ಸಂದೇಶಗಳು ಕಂಡುಬಂದರೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಂತೆ ಸಚಿವರು ಸೂಚಿಸಿದ್ದಾರೆ. ಪರಿಶೀಲಿಸದೆ ಯಾವುದೇ ಮೆಸೇಜ್‌ಗಳನ್ನು ಫಾರ್ವರ್ಡ್ ಮಾಡಬಾರದು. ಮುಖ್ಯವಾಗಿ ಬ್ಯಾಂಕಿಂಗ್, ಹಣಕಾಸು ಅಥವಾ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ಯೋಜನೆಗಳ ಬಗ್ಗೆ ಅಧಿಕೃತ ವೆಬ್‌ಸೈಟ್, ಮಾಧ್ಯಮ ಪ್ರಕಟಣೆಗಳು ಮತ್ತು ವಿಶ್ವಾಸಾರ್ಹ ಸುದ್ದಿ ಸಂಸ್ಥೆಗಳ ಮೂಲಕ ಮಾತ್ರ ಮಾಹಿತಿ ಪಡೆದುಕೊಳ್ಳಬೇಕು. ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಹೆಸರಿನಲ್ಲಿ ಬರುವ ಮೆಸೇಜ್‌ಗಳಿಗೆ ಕ್ಲಿಕ್ ಮಾಡುವ ಮುನ್ನ ಒಮ್ಮೆ ಯೋಚಿಸಿ ಎಂದು ಸಚಿವ ಪ್ರಹ್ಲಾದ್ ಜೋಶಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯದ ಹೆಸರನ್ನು ಬಳಸಿಕೊಂಡು ಕೆಲವರು ಇಂತಹ ನಕಲಿ ಸುದ್ದಿ ಮತ್ತು ಸಂದೇಶಗಳನ್ನು ಹರಡುತ್ತಿದ್ದಾರೆ. ಆದರೆ MNRE ವತಿಯಿಂದ ‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಎಂಬ ಯಾವುದೇ ಯೋಜನೆ ಜಾರಿಗೆ ಬಂದಿಲ್ಲ ಎಂದು ಹೇಳಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others