ನವದೆಹಲಿ: ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವುದು ಸರ್ಕಾರದ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಆಡಳಿತಾರೂಢ ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ನೀಟ್ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು” ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಸಂಸದರ ಮೇಲಿದೆ. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇರಬೇಕು ಎಂದರು.
ಇದೊಂದು ರಾಷ್ಟ್ರೀಯ ಸಮಸ್ಯೆ, ಯುವಕರ ಭದ್ರತೆ ಮತ್ತು ಭವಿಷ್ಯ ಸರ್ಕಾರದ ಆದ್ಯತೆಯಾಗಿದೆ ಎಂದರು. ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.ಯುವಕರ ಭವಿಷ್ಯವೇ ನಮ್ಮ ಆದ್ಯತೆ ಯುವಕರ ಭವಿಷ್ಯವೇ ಮೊದಲ ಆದ್ಯತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ರಾಜಕೀಯ ವಿಷಯವಾಗಬಾರದು ಎಂದು ಹೇಳಿದ್ದಾರೆ.
ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದಿರುವ ಪ್ರಧಾನಿ. ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತಗೊಳಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.
ಭವಿಷ್ಯದಲ್ಲಿ ಯಾವುದೇ ರೀತಿಯ ಸೋರಿಕೆ ನಡೆಯದಂತೆ ಅತ್ಯಂತ ಪಾರದರ್ಶಕ ಹಾಗೂ ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಸರ್ಕಾರಿ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಸಾಮೂಹಿಕ ಪ್ರಯತ್ನಗಳು ನಡೆಯಬೇಕೆಂದು ಕರೆ ನೀಡಿದ್ದಾರೆ.





