Priyanka Gandhi: ಜಂತರ್ ಮಂತರ್‌ನಲ್ಲಿ ನೆರೆದಿದ್ದ ಯುವಕರ ಧ್ವನಿ ಈ ದೇಶದ ನಿಜವಾದ ಶಕ್ತಿಯಾಗಿದೆ -ಪ್ರಿಯಾಂಕಾ

ನವದೆಹಲಿ: ರಾಜಕೀಯ ಜಗತ್ತಿನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಇತ್ತೀಚಿಗೆ ದೆಹಲಿಯ ಯುವಕರ ಧರಣಿ ಎಲ್ಲರ ಮೆಚ್ಚುಗೆಗೆ ಪ್ರಮುಖ ಪಾತ್ರ ವಹಿಸಿದೆ. ಇದೇ ವಿಚಾರವಾಗಿ ಕೆಲವರು ತಮ್ಮ-ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಈಗ ಇದೆ ವಿಷಯಕ್ಕೆ ಕೈ ಪಕ್ಷದ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ದೇಶದ ಸ್ವಾತಂತ್ರ್ಯ ಸಂಗ್ರಾಮವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ರೂಪುಗೊಂಡಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಜೆರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವ ಹಾಕಿ ಇಂಡಿಯಾ ನಿರ್ಧಾರವನ್ನು ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿರುವುದು ಬೆಳಕಿಗೆ ಬಂದಿದೆ.

ದೇಶದ ಇತಿಹಾಸ ಮತ್ತು ಪರಂಪರೆಯನ್ನು ಬದಲಾಯಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಇದೂ ಒಂದು ಎಂದು ಅವರು ಆರೋಪಿಸಿದ್ದಾರೆ.

ಮಹಾತ್ಮ ಗಾಂಧಿಯವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಾರ್ಟಿ ಆ ಹೋರಾಟದ ನೇತೃತ್ವ ವಹಿಸಿತ್ತು. ಈ ದೇಶದ ಆತ್ಮವು ಅಹಿಂಸೆ, ಸತ್ಯ ಮತ್ತು ಸಹೋದರತ್ವದಲ್ಲಿ ಅಡಗಿದೆ. ಅದನ್ನು ಆರ್‌ಎಸ್‌ಎಸ್ ಆಗಲಿ ಅಥವಾ ಬೇರಾರೇ ಆಗಲಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ದೇಶದ ಸ್ವಾತಂತ್ರ್ಯ ಸಂಗ್ರಾಮವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ರೂಪುಗೊಂಡಿತ್ತು. ಇದರಲ್ಲಿ ಆರ್‌ಎಸ್‌ಎಸ್ ಯಾವುದೇ ಪಾತ್ರವಹಿಸಿಲ್ಲ. ಇಡೀ ದೇಶಕ್ಕೆ ಈ ವಾಸ್ತವ ತಿಳಿದಿದೆ. ಅರಿಯದವರಿಗೂ ಈಗ ಅವರ ನಿಜವಾದ ಉದ್ದೇಶ ಏನೆಂಬುದು ಅರ್ಥವಾಗುತ್ತಿದೆ.

ಅವರು ಎಷ್ಟೇ ವಿಭಜನೆ ಉಂಟುಮಾಡಿದರೂ, ಹಿಂಸಾಚಾರವನ್ನು ಪ್ರಚೋದಿಸಿದರೂ ಅಥವಾ ದ್ವೇಷವನ್ನು ಹರಡಿದರೂ, ಸಹೋದರತ್ವ, ಪರಸ್ಪರ ಪ್ರೀತಿ ಮತ್ತು ಏಕತೆಯಿಂದ ಕೂಡಿರುವ ಈ ದೇಶದ ಆತ್ಮವನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ದೇಶದ ಯುವಜನತೆ ಈ ಬಗ್ಗೆ ಏನು ಯೋಚಿಸುತ್ತಿದ್ದಾರೆ ಎಂಬುದನ್ನು ನೀವು ನೋಡಿದ್ದೀರಿ. ಜಂತರ್ ಮಂತರ್‌ನಲ್ಲಿ ನೆರೆದಿದ್ದ ಯುವಕರು ಆಡಿದ ಮಾತುಗಳನ್ನು ಕೇಳಿದ್ದೀರಿ. ಅದೇ ಈ ದೇಶದ ನಿಜವಾದ ಧ್ವನಿ” ಎಂದು ಹೇಳಿದರು.

ಮುಂಗಾರು ಅಧಿವೇಶನದ ಆಗಮಿಸಿದ ವೇಳೆ ಸಂಸತ್ತಿನ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ತಂಡದ ಸಮವಸ್ತ್ರವನ್ನೇ ಬದಲಾಯಿಸಲಿ ಅಥವಾ ಶಿಕ್ಷಣ ನೀತಿಯ ಮೂಲಕ ಇತಿಹಾಸವನ್ನೇ ತಿರುಚಲು ಯತ್ನಿಸಲಿ ಎಂದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others