ಸರ್ಕಾರಿ ನೌಕರರಿಗೆ ಗುಣಮಟ್ಟದ ಆರೋಗ್ಯ ಸೇವೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ,: ಜಿಲ್ಲೆಯಲ್ಲಿ ಈಗಾಗಲೇ 24 ಆಸ್ಪತ್ರೆಗಳು ಎಬಿ-ಆರ್‍ಕೆ ಯೋಜನೆಯಡಿ ನೋಂದಣಿಯಾಗಿವೆ. ಈ ಪೈಕಿ 20 ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿಯೂ ನೋಂದಣಿ ಆಗಿವೆ. ಉಳಿದ ನಾಲ್ಕು ಆಸ್ಪತ್ರೆಗಳು ನೋಂದಣಿ ಆಗಬೇಕಿದ್ದು, ಅರ್ಹತೆ ಹೊಂದಿರುವ ಇತರೆ ಆಸ್ಪತ್ರೆಗಳು ಯೋಜನೆಯಡಿ ಸೇರ್ಪಡೆಯಾಗಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.

ಅವರು (ಅ.27) ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್, ಧಾರವಾಡ ಜಿಲ್ಲಾ ಘಟಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದರು.

ಹಿಂದೆ ಯೋಜನೆಯಡಿ ನಿಗದಿಯಾಗಿದ್ದ ದರಗಳು ಹಾಗೂ ಪಾವತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿದ್ದ ಕಾರಣ ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಆಗಲು ಹಿಂದೇಟು ಹಾಕುತ್ತಿದ್ದವು. ಇದೀಗ ಯೋಜನೆಯಲ್ಲಿ ಉದ್ಯೋಗದಾತರ ಜೊತೆಗೆ ಉದ್ಯೋಗಿಗಳ ಕೊಡುಗೆಯೂ ಇರುವುದರಿಂದ, ಸರ್ಕಾರಿ ನೌಕರರು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯಲು ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಅವರು ತಿಳಿಸಿದರು.

ಯೋಜನೆಯಡಿ ಪಾವತಿ ಪ್ರಕ್ರಿಯೆಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಸಿಜಿಎಚ್‍ಎಸ್ ದರಗಳಿಗೆ ಅನುಗುಣವಾಗಿ ಪಾವತಿ ದರಗಳನ್ನು ನಿಗದಿಪಡಿಸಲಾಗಿದೆ. ಇದರಿಂದ ಆಸ್ಪತ್ರೆಗಳಿಗೆ ಅನುಕೂಲವಾಗಲಿದ್ದು, ಹೆಚ್ಚಿನ ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಆಗುವ ನಿರೀಕ್ಷೆಯಿದೆ. ಧಾರವಾಡ ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರಿದ್ದಾರೆ. ಅಲ್ಲದೆ, ನೆರೆಯ ಜಿಲ್ಲೆಗಳಿಂದಲೂ ಹಲವು ಸರ್ಕಾರಿ ನೌಕರರು ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಯೋಜನೆಯಡಿ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಆಸ್ಪತ್ರೆಗಳು ಯೋಜನೆಯೊಂದಿಗೆ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಹುಬ್ಬಳ್ಳಿ ಭಾರತೀಯ ವೈದ್ಯಕೀಯ ಸಂಘದ (IMA) ಡಾ. ಬಸವರಾಜ ಸರ್ಜನ ಅವರು ಮಾತನಾಡಿ, ಆರೋಗ್ಯ ಸಂಜೀವಿನಿ ಯೋಜನೆಯಡಿ ಪರಿಷ್ಕøತ ದರಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ನಸಿರ್ಂಗ್ ಹೋಮ್‍ಗಳು ಹಾಗೂ ವೈದ್ಯಕೀಯ ಸಂಸ್ಥೆಗಳನ್ನು ನೋಂದಣಿಗೆ ಒಳಪಡಿಸುವಂತೆ ಹುಬ್ಬಳ್ಳಿ ಐಎಂಎ ಮನವಿ ಮಾಡಿದೆ ಎಂದು ಅವರು ಹೇಳಿದರು.

ಹಿಂದೆ ದರಗಳಲ್ಲಿ ವ್ಯತ್ಯಾಸವಿದ್ದ ಕಾರಣ ಹಲವು ನಸಿರ್ಂಗ್ ಹೋಮ್‍ಗಳು ಯೋಜನೆಯಡಿ ನೋಂದಣಿಗೆ ಆಸಕ್ತಿ ತೋರಿರಲಿಲ್ಲ. ಇದೀಗ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲಾಗಿದ್ದು, ಆಯುμÁ್ಮನ್ ಭಾರತ್–ಆರೋಗ್ಯ ಕರ್ನಾಟಕ (AB-ArK) ಮಾದರಿಯಲ್ಲಿ ವ್ಯವಸ್ಥೆ ಉತ್ತಮಗೊಂಡಿದೆ. ಜೊತೆಗೆ ಚಿಕಿತ್ಸಾ ವೆಚ್ಚದ ಮರುಪಾವತಿ ವ್ಯವಸ್ಥೆಯೂ ಸುಧಾರಿಸಿದೆ. ಹುಬ್ಬಳ್ಳಿಯಲ್ಲಿ ಸುಮಾರು 18 ನಸಿರ್ಂಗ್ ಹೋಮ್‍ಗಳು ಸೂಪರ್ ಸ್ಪಷಿಲಿಟಿ ಹಾಗೂ ಸ್ಪಷಿಲಿಟಿ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿವೆ. ಇದರೊಂದಿಗೆ ಎರಡು ವೈದ್ಯಕೀಯ ಕಾಲೇಜುಗಳೂ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ರೀತಿಯ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಸಾಮಥ್ರ್ಯ ಹೊಂದಿವೆ ಎಂದು ಅವರು ಹೇಳಿದರು.

ಆರೋಗ್ಯ ಸಂಜೀವಿನಿ ಯೋಜನೆಯ ಪರಿಷ್ಕೃತ ದರಗಳು ಮತ್ತು ಸುಧಾರಿತ ಮರುಪಾವತಿ ವ್ಯವಸ್ಥೆಯ ಕುರಿತು ವೈದ್ಯಕೀಯ ಸಂಸ್ಥೆಗಳಿಗೆ ಸೂಕ್ತ ಮಾಹಿತಿ ನೀಡಿ, ಅವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯಡಿ ಸೇರ್ಪಡೆಗೊಳಿಸಬೇಕು. ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಗೆ ಅನಾರೋಗ್ಯ ಉಂಟಾದ ಸಂದರ್ಭದಲ್ಲಿ ಅಗತ್ಯವಿರುವ ಉತ್ತಮ ವೈದ್ಯಕೀಯ ಸೇವೆ ದೊರೆಯುವಂತೆ ಹುಬ್ಬಳ್ಳಿ ಐಎಂಎ ಹಾಗೂ ಧಾರವಾಡದ ವೈದ್ಯಕೀಯ ಸಮುದಾಯ ಸಂಪೂರ್ಣ ಸಹಕಾರ ನೀಡಲಿದೆ. ಸೇವಾ ಮನೋಭಾವದಿಂದ ಸರ್ಕಾರಿ ನೌಕರರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ವೈದ್ಯರು ಸಿದ್ಧರಿದ್ದಾರೆ ಎಂದು ಅವರು ತಿಳಿಸಿದರು.

ಕಾರ್ಯಾಗಾರದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನೋಡಲ್ ಆಫೀಸರ್ ಡಾ. ಶಶಿಧರ ಕಳಸನೂರಮಠ ಅವರು ಕಾರ್ಯಾಗಾರದ ಮುಖ್ಯ ಅಂಶಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ, ಅವರು ಮಾತನಾಡಿದರು. ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಡಾ. ಸಿದ್ದನಗೌಡ ಪಾಟೀಲ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾರ್ಜುನ ಸೊಲಗಿ ನಿರೂಪಿಸಿದರು. ರಮೇಶ ಲಿಂಗದಾಳ ಅವರು ಕಾರ್ಯಕ್ರಮ ವಂದಿಸಿದರು.

ಈ ಕಾರ್ಯಾಗಾರದಲ್ಲಿ ಪ್ರೈವೇಟ್ ಮೆಡಿಕಲ್ ಆಫೀಸರ್ ಡಾ. ವಾಯ್. ಎಸ್ ಚಿತ್ತರಗಿ, ಧಾರವಾಡ ಭಾರತೀಯ ವೈದ್ಯಕೀಯ ಸಂಘದ ಆಫೀಸರ್ ಡಾ. ಜಗದೀಶ ನಿರಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾಧಿಕಾರಿ ಕಛೇರಿ ಸಹಾಯಕ ಪ್ರಕಾಶ ಹೊಳೆಪ್ಪಗೋಳ, ನೌಕರರ ಸಂಘದ ಪದಾಧಿಕಾರಿಗಳು ಪ್ರಕಾಶ ಹಳಪೇಟೆ, ದೇವಿದಾಸ ಶಾಂತಿಕರ, ರಾಜಶೇಖರ ಹೊನ್ನಪ್ಪನವರ, ರಾಜೇಶ ಕೋನರೆಡ್ಡಿ, ಗಿರೀಶ ಚೌಡಕಿ, ಜಗದೀಶ ವಿರಕ್ತಮಠ, ಫಿರೋಜ ಗುಡೇನಕಟ್ಟಿ, ಉಮೇಶ ಕುರುಬರ, ಪ್ರಶಾಂತ ನವಲಿ ಹಾಗೂ ಆರೋಗ್ಯ ಮಿತ್ರರು ಉಪಸ್ಥಿತರಿದ್ದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others