ನವದೆಹಲಿ: ಜಾರ್ಖಂಡ್ನಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿತ್ತು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ವಿಷಯಕ್ಕೆ ಕಾಂಗ್ರೆಸ್ Congress ನಾಯಕ ರಾಹುಲ್ ಗಾಂಧಿಯವರು , ತಮ್ಮದೇ ಮೈತ್ರಿಕೂಟ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಎಕ್ಸ್ನಲ್ಲಿ ಅವರು ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ತಕ್ಷಣ ಮಾತುಕತೆ ನಡೆಸಬೇಕು. ಅವರ ಕಳವಳಗಳನ್ನು ಆಲಿಸಬೇಕು. ಈ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾರ್ಖಂಡ್ ವಿಧಾನಸೌಧದ ಕಡೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಬಳಸಿದ್ದಾರೆ. ಅಲ್ಲದೇ ಲಾಠಿಚಾರ್ಜ್ ಮಾಡಿದ್ದರು. ಈ ಸಮಯದಲ್ಲಿ ಅಶ್ರುವಾಯು ಬಳಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್ನ ರಾಂಚಿಯಲ್ಲಿ ಇಂದು JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಉಗ್ರ ರೂಪ ಪಡೆದುಕೊಂಡಿದೆ ಎಂದರು.
ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ತಪ್ಪು. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕಿದೆ. ಸಂವಾದ ಮಾತ್ರ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಜುಲೈ 20 ರಂದು ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ನಡೆದ ಪೊಲೀಸ್ ಲಾಠಿಚಾರ್ಜ್ ಬಗ್ಗೆ ಮಾತನಾಡಿ, ರಾಹುಲ್ ಗಾಂಧಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಾಗ ತೀವ್ರ ನಾಟಕೀಯ ಬೆಳವಣಿಗೆಗಳು ಮತ್ತು ಮಾತಿನ ಚಕಮಕಿ ನಡೆಯಿತು. ಇದಕ್ಕೆ ಆಡಳಿತಾರೂಢ ಸರ್ಕಾರವು ಕಟುವಾದ ಪ್ರತಿಕ್ರಿಯೆ ನೀಡಿತು. ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ನೇರ ವಾಗ್ದಾಳಿ ನಡೆಸಿ, ಸದನಕ್ಕೆ ಅವರ ಗೈರುಹಾಜರಿಯು “ಭಯ”ದ ಸಂಕೇತ ಎಂದು ಹೇಳಿದಾಗ ಈ ಸಂಘರ್ಷ ತೀವ್ರ ಸ್ವರೂಪ ಪಡೆಯಿತು.
ಮುಖ್ಯ ವಿಷಯವೇನೆಂದರೆ, ಸಂಸತ್ತಿನಲ್ಲಿ ಮಾತನಾಡಲು ನನಗೆ ಹಕ್ಕಿದೆ ಮತ್ತು ಆ ಹಕ್ಕನ್ನು ನನಗೆ ನೀಡಲೇಬೇಕು ಎಂದರು.ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನಕ್ಕೆ ಬಂದೇ ಇಲ್ಲ. ಅವರು ಯಾಕೆ ಬರುತ್ತಿಲ್ಲ? ಭಾರತದ ‘ಧೈರ್ಯಶಾಲಿ’ ಎಂದು ಹೇಳಿಕೊಳ್ಳುವ ಗೃಹ ಸಚಿವರು ಸದನದಲ್ಲಿ ಏಕೆ ಇಲ್ಲ? ಅವರು ಏನನ್ನೂ ಮಾಡಿಲ್ಲ ಮತ್ತು ಯಾವುದೇ ಆದೇಶವನ್ನೂ ನೀಡಿಲ್ಲ ಎಂದಾದರೆ, ತಾವು ಆದೇಶ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಬೇಕು ಎಂದರು.





