ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಕೊಡಿ :ಶಿವಾನಂದ ಪಾಟೀಲ್

ಬೆಂಗಳೂರು; ವಿಜಯಪುರ, ಬಾಗಲಕೋಟೆಯಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿಕೊಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದರೆ ಭವಿಷ್ಯದ ದಿನಗಳಲ್ಲಿ ನೀರಿನ ಕೊರತೆಯಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಪರಿಸ್ಥಿತಿಯ ಗಂಭೀರತೆ ಹಿನ್ನೆಲೆಯಲ್ಲಿ ತಕ್ಷಣ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಾವರಿ ಸಲಹಾ ಸಮಿತಿ ಸಭೆ ಕರೆದು ಚರ್ಚೆ ಮಾಡಿದ ನಂತರ ನೀರು ಹರಿಸುವ ನಿರ್ಧಾರ ಕೈಗೊಳ್ಳುವತನಕ ಕಾದು ಕುಳಿತುಕೊಳ್ಳುವ ಸಮಯ ಇದಲ್ಲ ಎಂದರು.

ಜಲಾಶಯದಲ್ಲಿ ಸದ್ಯಕ್ಕೆ ಬಳಸಬಹುದಾದ ನೀರಿನ ಪ್ರಮಾಣ 70 ಟಿಎಂಸಿ ಅಡಿ ನೀರಿದೆ. ಜಲಾಶಯ ಭರ್ತಿಯಾಗಲು 35 ಟಿಎಂಸಿ ನೀರು ಅಗತ್ಯವಿದೆ. ಮುಂಗಾರು ಇನ್ನೂ ಮುಗಿದಿಲ್ಲ. ಹೀಗಾಗಿ ಜಲಾಶಯ ಭರ್ತಿಯಾಗುವ ವಿಶ್ವಾಸ ಇದೆ ಎಂದು ಸೂಚಿಸಿದ್ದಾರೆ.

Share it :

Leave a Reply

Your email address will not be published. Required fields are marked *