ಬೆಂಗಳೂರು: ಆರ್ಎಸ್ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘವು ಕೋಮುವಾದ ಮತ್ತು ಜಾತಿವಾದದಿಂದ ಪ್ರೇರಿತವಾದ ‘ಸಾವಿರ ತಲೆಯ ವಿಷಪೂರಿತ ಹಾವು’ ಎಂದು ಬಣ್ಣಿಸಿರುವ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕ್ಷಮೆ ಯಾಚಿಸುವಂತೆ ಹೇಳಿದ್ದಾರೆ, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಂತರ ನಡೆದಿದೆ ಎನ್ನಲಾದ ‘ಶುದ್ಧೀಕರಣ’ ಪ್ರಕ್ರಿಯೆಯ ಸಂಬಂಧ, ಆರ್ಎಸ್ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆಗಳು ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಜಾಗೃತಿ ಹೊಂದಿರುವ ಹಾಗೂ ಜಾತಿ ಪದ್ಧತಿ ನಿರ್ಮೂಲನೆಯಾಗಬೇಕು ಎಂದು ನಂಬುವ ಪ್ರತಿಯೊಬ್ಬರೂ ಆರ್ಎಸ್ಎಸ್ನ ಹೀನ ಮನಸ್ಥಿತಿಯನ್ನು ಖಂಡಿಸಬೇಕು ಮತ್ತು ಅದರ ವಿರುದ್ಧ ಪ್ರತಿಭಟಿಸಬೇಕು’ ಎಂದು ಹೇಳಿದರು.
‘ಆರ್ಎಸ್ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆ ನಮ್ಮ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಅವರು ಹಾಗೆ ಮಾಡುವವರೆಗೂ ನಾವು ಈ ಪ್ರತಿಭಟನೆಯನ್ನು ಮುಂದುವರಿಸಬೇಕು ಮತ್ತು ಎದೆಗುಂದಬಾರದು. ಹೋರಾಟವನ್ನು ಮುಂದುವರಿಸುವಂತೆ ನಾನು ನಮ್ಮ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ.
RSS ಮತ್ತು ಅದರ ಅಂಗಸಂಸ್ಥೆಗಳನ್ನು ಗುರಿಯಾಗಿಸಿಕೊಂಡ ಯತೀಂದ್ರ ಸಿದ್ದರಾಮಯ್ಯ, ತಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತಿರುವ ಪ್ರತಿಭಟನೆಗಳನ್ನು ಮುಂದುವರಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
‘ಆರ್ಎಸ್ಎಸ್ ಸಾವಿರ ತಲೆಯ ವಿಷಕಾರಿ ಹಾವಿನಂತಿದೆ. ಇದು ಜಾತಿವಾದ, ಕೋಮುವಾದ ಮತ್ತು ಮನುವಾದದ ವಿಷದಿಂದ ತುಂಬಿದೆ. ಇದು ವಿಷವನ್ನು ಕಾರುತ್ತಾ ಇಡೀ ಸಮಾಜವನ್ನೇ ವಿಷಪೂರಿತಗೊಳಿಸಲು ಯತ್ನಿಸುವ ಹಾವಾಗಿದೆ. ಇದನ್ನು ನಿಯಂತ್ರಿಸದೆ ಬಿಟ್ಟರೆ, ನಮ್ಮ ಸಮಾಜ ಹಾಳಾಗುತ್ತದೆ ಮತ್ತು ದೇಶಕ್ಕೂ ಹಾನಿಯಾಗುತ್ತದೆ’ ಎಂದು ಹೇಳಿದರು.





