Siddaramaiah: ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಬೆಂಗಳೂರು: ದೆಹಲಿ ಜತಂರ್‌ ಮಂತರ್‌ ನಲ್ಲಿ ಧರಣಿ ಮಾಡುತ್ತಿದ್ದ ಯುವಜನತೆಯ ಬೇಡಿಗಳನ್ನು ಪೂರೈಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದ್ದು ಈ ವಿಚಾರ ವಾಸ್ತವದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದು ಕಾದು ನೋಡಬೇಕಿದೆ. ಈಗ ಅಷ್ಟೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಿದ್ದಾರೆ ಇದರ ಬೆನ್ನಲ್ಲೇ ಮಾಜಿ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸ್‌ ಖಾತೆಯ ಮೂಲಕ ಪೋಸ್ಟ್ ಹಂಚಿಕೊಂಡಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯ. ಅವರೆಲ್ಲರನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯ ಸಮರ್ಥವಾಗಿ ನಿರ್ವಹಿಸಿದೆಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು ಎಂದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ. ರಾಜಕೀಯದಿಂದ ಶಿಕ್ಷಣದವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು. ಈ ಹಿನ್ನೆಲೆ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು ಎಂದು ತಿಳಿಸಿದ್ದಾರೆ.

ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ಯುವಕರು ನಡೆಸಿದ್ದಾರೆ. ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ ಎಂದಿದ್ದಾರೆ.ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಅಧಿಕಾರಿಗಳು ಬದಲಾಗಿ ಹೊಸ ಅಧಿಕಾರ ಬರಬೇಕು ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others