ಎಸ್‍ಐಆರ್ ಅನ್ನು ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳಬೇಕು – ಶಾಸಕ ಬಿ.ವೈ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಇಂದು ಸುಮಾರು ಎರಡೂವರೆ ಗಂಟೆ ಕಾಲ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದಲ್ಲಿ ಇಡೀ ವ್ಯವಸ್ಥೆಯನ್ನ ಹಾಳು ಮಾಡುವ ಕೆಲಸ ಮಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ ಎಂದರು.

ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್‍ಐಆರ್ ಅನ್ನು ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಎಸ್‍ಐಆರ್ ವ್ಯವಸ್ಥಿತವಾಗಿ ಆಗಬೇಕು. ನಮ್ಮ ಕಾರ್ಯಕರ್ತರು ಇನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆ ಬಹಳಷ್ಟು ಚರ್ಚೆಗಳಾಗಿವೆ. ಪ್ರತಿಯೊಬ್ಬ ಕೋರ್ ಕಮಿಟಿ ಸದಸ್ಯರಿಗೆ ಒಂದೊಂದು ವಿಭಾಗವನ್ನ ಹಂಚಿದ್ದೇವೆ ಎಂದು ವಿವರಿಸಿದರು.

ಸೋಮವಾರ (ಜು.6) ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಜೀ ಅವರ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಪಕ್ಷದ ಇತರ ಪ್ರಮುಖರು ಚುನಾವಣಾ ಆಯುಕ್ತರನ್ನ ಭೇಟಿ ಮಾಡಿ ನಮ್ಮ ಸಮಸ್ಯೆಗಳು, ರಾಜ್ಯದಲ್ಲಿ ಆಗುತ್ತಿರುವ ಗೊಂದಲಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಲಿದ್ದಾರೆ
ಒಂದೊಂದು ವಿಭಾಗಕ್ಕೆ ಮೂರು ಜಿಲ್ಲೆಗಳು ಬರುತ್ತವೆ. ಆ ವಿಭಾಗಕ್ಕೆ ಕೋರ್ ಕಮಿಟಿ ಸದಸ್ಯರು ಪ್ರವಾಸ ಮಾಡಬೇಕು. ಶಾಸಕರು, ಮಾಜಿ ಶಾಸಕರನ್ನು ಭೇಟಿ ಮಾಡಿ, ಇನ್ನೂ ಚುರುಕಾಗಿ ಅದನ್ನು ಕೈಗೆತ್ತಿಕೊಳ್ಳಬೇಕು. ಪ್ರವಾಸ ಮಾಡಬೇಕೆಂಬ ನಿರ್ಧಾರ ಆಗಿದೆ ಎಂದರು.

ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ರಾಜ್ಯದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ವಿಪಕ್ಷ ನಾಯಕರಾದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಸೇರಿದಂತೆ ಇತರ ಎಲ್ಲ ಕೋರ್ ಕಮಿಟಿ ಸದಸ್ಯರು ಭಾಗವಹಿಸಿದ್ದರು ಎಂದು ವಿವರಿಸಿದರು.

ಹಿರಿಯರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಟಿ ರವಿ ಅವರು ಜೆಡಿಎಸ್‍ನ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ ರೂಪಿಸಲು ಜವಾಬ್ದಾರಿ ನೀಡಿದ್ದೇವೆ 2ನೇ ಪ್ರಮುಖ ವಿಚಾರವೆಂದರೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ. ಅದರ ಬಗ್ಗೆಯೂ ಚರ್ಚೆ ಆಗಿದೆ. ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *