ಎರಡು ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಸಚಿವರ ಚಲನವಲನದ ಮೇಲೆ ನಿಗಾ ಇಡಲಾಗಿದೆ : ಸಿಎಂ ಡಿಕೆಶಿ

ಬೆಂಗಳೂರು: ಸಚಿವರ ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ಎಂದು ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಎರಡು ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರ ಚಲನವಲನದ ಮೇಲೆ ನಿಗಾ ಇಡಲಾಗಿದೆ, ಖಾಸಗಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರು ಹುಷಾರಾಗಿರುವಂತೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಗುಪ್ತಚರ ಮಾಹಿತಿ ಆಧರಿಸಿ ಡಿಕೆಶಿ ಸುಳಿವು ನೀಡಿದ್ದು, ಟಾರ್ಗೆಟ್ ಮಾಡಿರುವ ಐವರು ಸಚಿವರ ಜೊತೆ ಡಿಕೆಶಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಒಟ್ಟಾಗಿ ಹೇಳಿ ಬಳಿಕ ಸಿಎಂ ಆ ಐದು ಸಚಿವರ ಜೊತೆ ಪ್ರತ್ಯೇಕ ಮಾತುಕತೆ ಮಾಡಿ ಬುದ್ಧಿಮಾತು ಹೇಳಿದ್ದಾರೆ. ಯಾರೆಲ್ಲಾ ಹುಷಾರಾಗಿರಬೇಕು ಎಂದು ಪ್ರತ್ಯೇಕವಾಗಿ ಸಿಎಂ ಅಲರ್ಟ್ ಮೆಸೇಜ್ ನೀಡಿದ್ದಾರೆ. ಡಿಕೆಶಿ ಮಾತುಕತೆ ನಡೆಸಿರುವ ಆ ಐವರು ಸಚಿವರು ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.

ರಾಜ್ಯದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಕಚೇರಿ ‘ಕೃಷ್ಣಾ’ದಿಂದ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರ ಮಹತ್ವದ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು, ಸಂಸದರು, ಸಚಿವರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಎಸ್‌ಐಆರ್‌ ವಿಚಾರದಲ್ಲಿ ಪಕ್ಷವು ನಿರಂತರ ಅಭಿಯಾನಕ್ಕೆ ಸಜ್ಜಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಿಂದ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಕೆ.ಎಚ್‌. ಮುನಿಯಪ್ಪ, ಶಿವಲಿಂಗೇಗೌಡ, ಜಮೀರ್ ಅಹಮದ್ ಖಾನ್, ಎಸ್‌.ಎಸ್‌. ಮಲ್ಲಿಕಾರ್ಜುನ, ಎಚ್‌.ಸಿ. ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ ಹಾಗೂ ಕೆ.ಎಸ್‌. ಬಸವನತಪ್ಪ ಭಾಗವಹಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಸಂಜೆ ಗೃಹ ಕಚೇರಿ ‘ಕೃಷ್ಣಾ’ದಿಂದ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರ ಮಹತ್ವದ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು, ಸಂಸದರು, ಸಚಿವರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಎಸ್‌ಐಆರ್‌ ವಿಚಾರದಲ್ಲಿ ಪಕ್ಷವು ನಿರಂತರ ಅಭಿಯಾನಕ್ಕೆ ಸಜ್ಜಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಿಂದ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಕೆ.ಎಚ್‌. ಮುನಿಯಪ್ಪ, ಶಿವಲಿಂಗೇಗೌಡ, ಜಮೀರ್ ಅಹಮದ್ ಖಾನ್, ಎಸ್‌.ಎಸ್‌. ಮಲ್ಲಿಕಾರ್ಜುನ, ಎಚ್‌.ಸಿ. ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ ಹಾಗೂ ಕೆ.ಎಸ್‌. ಬಸವನತಪ್ಪ ಭಾಗವಹಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post