ನೀಟ್‌ಗಾಗಿ ಟೆಲಿಗ್ರಾಂ ನಿಷೇಧ – ಕೇಂದ್ರದ ನಿರ್ಧಾರಕ್ಕೆ ಅಸ್ತು ಎಂದ ದೆಹಲಿ ಹೈಕೋರ್ಟ್

ನವದೆಹಲಿ: ಒಂದು ಕಡೆ ನೀಟ್‌ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ,ಅವ್ಯವಾಹರಗಳ ವಿರುದ್ಧ ಯುವಕರು ಶಾಂತಿಯುತ ಹೋರಾಟ ಮಾಡುತ್ತಿದ್ದರೆ, ಮತ್ತೊಂದು ಕಡೆ ಕೇಂದ್ರ ಸರ್ಕಾರ ಶಾಕ್‌ ಮೇಲೆ ಶಾಕ್‌ ನೀಡುತ್ತಿದೆ. ನೀಟ್‌ ಯುಜಿ 2026 ಮರುಪರೀಕ್ಷೆ ಹಿನ್ನೆಲೆ, ಟೆಲಿಗ್ರಾಂ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ ಎನ್ನುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಈ ವಿಚಾರಕ್ಕೆ ಸರ್ಕಾರದ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ ಪೀಠ ಜೂ.18 ರಂದು ವಿಚಾರಣೆ ನಡೆಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಕೈ ಹಿಡಿದಿದೆ. ಸರ್ಕಾರದ ಕ್ರಮ ಕನಿಷ್ಠ ನಿರ್ಬಂಧವಾಗಿದ್ದು, ಇದರಿಂದ ಆದೇಶ ಅಸಮಾನವಾಗಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

Share it :

Leave a Reply

Your email address will not be published. Required fields are marked *