ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ಮೋದಿ

ನವದೆಹಲಿ: ಭಾರತದ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ದೇಶವನ್ನ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಸಾಧಿಸಲೇಬೇಕು. ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆಯ ಆವರಣದಿಂದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕುʻ ಕಳೆದ 12 ವರ್ಷಗಳಲ್ಲಿ ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಸಂಪೂರ್ಣವಾಗಿ ಬದಲಾಗಿದೆ. ಹಾಗಾಗಿ ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಅಭಿಯಾನವನ್ನು ಬಲಪಡಿಸುವುದು ಹಾಗೂ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸುವುದು ಅತ್ಯಂತ ಮುಖ್ಯ.

ಕಳೆದ 12 ವರ್ಷಗಳಲ್ಲಿ ರಕ್ಷಣಾ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಾಗಿದೆ. ಖಾದಿ ಮತ್ತು ಗ್ರಾಮೋದ್ಯಮದ ಉತ್ಪಾದನೆ 5 ಪಟ್ಟು ಏರಿಕೆಯಾಗಿದೆ. ಎಲೆಕ್ಟ್ರಾನಿಕ್ಸ್ ಉತ್ಪಾದನೆ ಏಳು ಪಟ್ಟು ಹೆಚ್ಚಾಗಿದೆ. ಮೊಬೈಲ್ ಫೋನ್ ಉತ್ಪಾದನೆಯಲ್ಲಿ 33 ಪ್ರತಿಶತ ಏರಿಕೆಯಾಗಿದೆ. ಡಿಜಿಟಲ್ ವಹಿವಾಟುಗಳಲ್ಲಿ 100 ಪ್ರತಿಶತ ವೃದ್ಧಿಯಾಗಿದೆ. ಇಂಧನ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದೆಲ್ಲದರ ಜತೆಗೆ ಭಾರತದ ಭವಿಷ್ಯದ ಆರ್ಥಿಕ ಬೆಳವಣಿಗೆಗೆ ಇಂಧನ ಭದ್ರತೆ ಅತ್ಯಂತ ಪ್ರಮುಖವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ 12 ವರ್ಷಗಳಲ್ಲಿ ಭಾರತವು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ. ದೇಶದ ರಕ್ಷಣಾ ಉತ್ಪಾದನೆ ಗಣನೀಯವಾಗಿ ಹೆಚ್ಚಾಗಿದೆ. ಕೃತಕ ಬುದ್ಧಿಮತ್ತೆ, ಅಣುಶಕ್ತಿ, ದೂರಸಂಪರ್ಕ, ಡಿಜಿಟಲ್ ತಂತ್ರಜ್ಞಾನ ಹಾಗೂ ರೈಲ್ವೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.ನಕಳೆದ 12 ವರ್ಷಗಳಲ್ಲಿ ದಲಿತರು, ಶೋಷಿತರು, ಬಡವರು, ಮಧ್ಯಮ ವರ್ಗದವರು, ಯುವಕರು ಸೇರಿದಂತೆ ಕೋಟ್ಯಂತರ ಭಾರತೀಯರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಶ್ರಮಿಸಿದ್ದಾರೆ. ಈ ಪ್ರಯತ್ನಗಳ ಫಲವಾಗಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others