ರಾಜ್ಯ ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ : ಸಿಎಂ ಡಿಕೆ.ಶಿವಕುಮಾರ್

ಮೈಸೂರು: ರಾಜ್ಯ ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ವಿವಿಧ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಮಾಡುತ್ತಿರುವ ವೆಚ್ಚದ ಬಗ್ಗೆಯೂ ಅವರು ಮಾಹಿತಿ ನೀಡಿದ ಅವರು, ಸೂಕ್ತ ಸ್ಥಳಗಳಲ್ಲಿ ತೇಗದ ಮರಗಳನ್ನು ಬೆಳೆಸುವಂತೆ ಅವರು ಸಲಹೆ ನೀಡಿದರು. ಮುಂದಿನ 20ರಿಂದ 25 ವರ್ಷಗಳಲ್ಲಿ ತೇಗದ ಮರಗಳು ರೈತರಿಗೆ ಉತ್ತಮ ಆರ್ಥಿಕ ಆಸ್ತಿಯಾಗಬಹುದು ಎಂದು ಹೇಳಿದರು.

ರಸ್ತೆಗಳ ಬದಿಯಲ್ಲಿ ತೇಗದ ಮರಗಳನ್ನು ನೆಟ್ಟರೆ, ಪಕ್ಕದ ಜಮೀನು ಹೊಂದಿರುವವರು ಅವುಗಳ ನಿರ್ವಹಣೆಯ ಜವಾಬ್ದಾರಿ ವಹಿಸಬೇಕು. ಮರಗಳ ಮಾರಾಟದಿಂದ ಬರುವ ಆದಾಯದಲ್ಲಿ 70ರಷ್ಟು ಪಾಲನ್ನು ರೈತರಿಗೆ ಹಾಗೂ ಉಳಿದ 30ರಷ್ಟು ಪಾಲನ್ನು ಸರ್ಕಾರಕ್ಕೆ ನೀಡುವ ಮಾದರಿಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ತಿಳಿಸಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ರೈತರ ಪಂಪ್‌ಸೆಟ್‌ಗಳಿಗೆ ಸುಮಾರು ರೂ.20,000 ಕೋಟಿ, ಗೃಹಜ್ಯೋತಿ ಯೋಜನೆಗೆ ಸುಮಾರು ರೂ.7,000 ಕೋಟಿ ಹಾಗೂ ಗೃಹ ಲಕ್ಷ್ಮೀ ಯೋಜನೆಗೆ ರೂ.22,000 ಕೋಟಿ ವೆಚ್ಚ ಮಾಡಲಾಗುತ್ತಿದೆ. ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳಿಗೂ ಹಣ ಒದಗಿಸಲಾಗುತ್ತಿದೆ ಎಂದು ಹೇಳಿದರು.

ತೇಗದ ಮರಗಳ ಬೆಳೆಸುವಿಕೆಯನ್ನು ಉತ್ತೇಜಿಸಲು ಸರ್ಕಾರ ‘ತೇಗ ಸಿರಿ’ ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪ್ರತಿವರ್ಷ ಒಂದು ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದರು.

ಇನ್ನು ಅಲ್ಪಸಂಖ್ಯಾತರ ವಿಚಾರವಾಗಿ ಮಾತನಾಡಿ ವರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

“ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಯಾವ ಜಾತಿ, ಧರ್ಮದಲ್ಲಿ ಹುಟ್ಟುತ್ತೇವೆ ಎಂದು ಅರ್ಜಿ ಹಾಕುವುದಿಲ್ಲ. ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ. ಶಾಂತಿ ನೆಲೆಸಿ, ದೇಶದಲ್ಲಿ ಐಕ್ಯತೆ, ಸಮಗ್ರತೆ ಇರಬೇಕು ಎಂದು ಎಲ್ಲಾ ಧರ್ಮಗುರುಗಳು ಸಾರಿದ್ದಾರೆ” ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others