ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ : ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಹಿರಿಯೂರು ವಿಧಾನಸಭಾ ಉಪಚುನಾವಣೆಗೆ ಒಮ್ಮತದ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರವಾಗಿ ಕಾಡುಗೊಲ್ಲ ಸಮುದಾಯದ ಪ್ರಮುಖರು ಹಾಗೂ ಕೇಂದ್ರದ ಬಿಜೆಪಿ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದ್ದು, ಒಮ್ಮತ ಹಾಗೂ ಸಮನ್ವಯದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

2006–07ನೇ ಸಾಲಿನಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದಿಂದ ₹4,500 ಕೋಟಿ ವೆಚ್ಚದ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಆದರೆ, ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರವು ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ದೂರಿದರು.

ಹಿರಿಯೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯವಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸುತ್ತೇನೆ. ಎರಡು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿವೆ. ಹಿರಿಯೂರು ಕ್ಷೇತ್ರದಲ್ಲೂ ಯಾವುದೇ ಗೊಂದಲವಿಲ್ಲದೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಉಪಚುನಾವಣೆ ಸುಲಭವಲ್ಲ. ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸ್ಪರ್ಧಿಸಬೇಕು ಎಂಬ ಅಭಿಪ್ರಾಯವಿದೆ ಎಂದರು.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಈಗಾಗಲೇ ಪೂರ್ಣಗೊಂಡಿರುವ ಹಿಂದಿನ ಕಾಮಗಾರಿಗಳಿಗೆ ಗುತ್ತಿಗೆ ದಾರರಿಗೆ ₹38,000 ಕೋಟಿ ಬಾಕಿ ಪಾವತಿಸ ಬೇಕಿದೆ. ಇಷ್ಟೊಂದು ದೊಡ್ಡ ಮೊತ್ತದ ಬಾಕಿ ಉಳಿಸಿಕೊಂಡಿರುವ ಸರ್ಕಾರ, ಯಾವುದೇ ಆರ್ಥಿಕ ಅನುಮೋದನೆ, ಬಜೆಟ್ ಮೀಸಲಿಡದೆ ಕೇವಲ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಪ್ರಚಾರದ ಕೆಲಸಕ್ಕೆ ಮಾತ್ರ ಸೀಮಿತವಾಗಿದೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸೂಕ್ತ ಬೆಲೆ ನಿಗದಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹750ರಷ್ಟು ಹೆಚ್ಚುವರಿ ಬೆಂಬಲ ಬೆಲೆಯನ್ನು ಒದಗಿಸುವುದು ರಾಜ್ಯ ಸರ್ಕಾರದ ಹೊಣೆಯಾಗಿದೆ. ಕೂಡಲೇ ರೈತರ ಹಿತ ಕಾಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಇನ್ನೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯವಿದೆ, ಈ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಹಿರಿಯೂರು ಉಪಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಹಿರಿಯೂರು ಮತ್ತು ಚಿತ್ರದುರ್ಗದ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಿದರೆ ಗೆಲುವು ಸುಲಭವಾಗಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.

Share it :

Leave a Reply

Your email address will not be published. Required fields are marked *