ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾಧ್ಯಮದವರು ದೇಶದ ಯಾವ ಸಚಿವರ ಹಾಗೂ ಯಾವ ಮುಖ್ಯಮಂತ್ರಿಗಳ ಮೇಲೆ ಎಷ್ಟು ಮೊಕದ್ದಮೆಗಳಿವೆ ಎಂಬ ದಾಖಲಾತಿಗಳೊಂದಿಗೆ ಪ್ರಶ್ನಿಸಬೇಕು.
ಸಚಿವ ನಾಗೇಂದ್ರ ಅವರ ರಾಜಿನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಇಲ್ಲಿ ನೆಲದ ಕಾನೂನಿದೆ ಎಂದು ಹೇಳುದ್ದಾರೆ.
ಪ್ರತಿಪಕ್ಷಗಳು ಅಂತಹ ಎಷ್ಟು ಸಚಿವರ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಯನ್ನು ಕೇಳುತ್ತಿದ್ದಾರೆ ಎಂಬುದನ್ನು ಮಾಧ್ಯಮಗಳೂ ಪರಿಶೀಲಿಸಬೇಕು. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 15 ಪರಿಶಿಷ್ಟ ವರ್ಗದ ಶಾಸಕರು ಆಯ್ಕೆಯಾಗಿದ್ದು , ಈ ಬಗ್ಗೆ ಅವರಿಗೆ ಮತ್ಸರವಿದೆ. ಅವರ ಪಕ್ಷದಲ್ಲಿ ಯಾವುದೇ ಪರಿಶಿಷ್ಟ ವರ್ಗದ ನಾಯಕರು ಹೊರಹೊಮ್ಮಲಿಲ್ಲ ಎಂಬ ಅಸಮಾಧಾನವಿರುವ ಕಾರಣ, ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ 15 ಮಂದಿ SC-ST ಶಾಸಕರಿರುವುದು ವಿಪಕ್ಷಗಳ ಮತ್ಸರಕ್ಕೆ ಕಾರಣ: ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂದು ತಿಳಿಸಲಿ’ ಎಂದರು.ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟೀಸು ನೀಡಿ ಚರ್ಚೆ ನಡೆಸಲಿ. ಸಚಿವರ ರಾಜಿನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ ಎಂದು ತಿಳಿಸಿದ್ದಾರೆ.





