ಬೆಂಗಳೂರು: ಜೂ. 19ಕ್ಕೆ ಬಿಡುಗಡೆ ಆಗಬೇಕಿದ್ದ ದರ್ಶನ್ ಅವರ ಬಾಸ್ ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಅಡ್ಡಿಬಂದಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ನಗರದ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯುವ ಅವಕಾಶವನ್ನು ಬಿಡುಗಡೆ ಮಾಡಲು ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19 ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಸದ್ಯಕ್ಕೆ ಬಿಡುಗಡೆ ಆಗುವುದು ಅನುಮಾನ ಎನ್ನಲಾಗಿದೆ.





