ಬೆನ್ನಿಗೆ ಚೂರಿ ಇರಿದವರ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ : ವಿಜಯೇಂದ್ರ ಆಕ್ರೋಶ

ಬೆಂಗಳೂರು :ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷಕ್ಕೆ, ಮೈತ್ರಿ ದ್ರೋಹ ಬಗೆದವರಿಗೆ ಕಾರಣವಿಲ್ಲ ಎಂದು ಕ್ಷಮಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರ್ಯಾರು ಬೆನ್ನಿಗೆ ಚೂರಿ ಇರಿದು ಆಟ ಆಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಸದ್ಯ ನಮ್ಮ ಬಳಿ ಇದ್ದು, ಇವತ್ತು ಅಥವಾ ನಾಳೆಯೊಳಗೆ ಇದರ ಸಂಪೂರ್ಣ ಚಿತ್ರ ನಮಗೆ ಸಿಗಲಿದೆ. ಈ ಕ್ರಾಸ್ ವೋಟಿಂಗ್ನಿಂದಾಗಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತೀವ್ರ ಬೇಸರ ತಂದಿದೆ. ನಮಗೂ ಕೂಡ ಅಷ್ಟೇ ನೋವುಂಟಾಗಿದೆ. ನಾವಿಬ್ಬರೂ ರಾಜಕೀಯ ದ್ರೋಹ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದ್ದಾರೆ.

ಅಡ್ಡ ಮತದಾನದ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ನಿನ್ನೆಯ ಫಲಿತಾಂಶ ಸಂಘಟನೆಯಾಗಿದ್ದು, ನಿನ್ನೆ ನಡೆದ ಜೆಡಿಎಸ್ ನಿಂದ ಆರೇಳು ಜನ ಹಾಗೂ ಬಿಜೆಪಿಯಿಂದ ನಾಲ್ಕೈದು ಜನ ಅಡ್ಡ ಮತದಾನ ಮಾಡಿದ್ದಾರೆ. ಈ ಘಟನೆ ನಿಜಕ್ಕೂ ಆಗಬಾರದಿತ್ತು, ದುರಾದೃಷ್ಟವಶಾತ್ ನಡೆದುಹೋಗಿದೆ ಎಂದರು.

Share it :

Leave a Reply

Your email address will not be published. Required fields are marked *