ಮೈಸೂರು: 2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಸೈಟು ಹಂಚಿಕೆ ಹಗರಣ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . 50:50 ಸೈಟುಗಳು ಮತ್ತು ಸೈಟುಗಳಲ್ಲಿ ಮನೆ ಕಟ್ಟಿದವರ ಲಿಸ್ಟ್ ತರಿಸುತ್ತಿದ್ದೇನೆ. 2019 ರಿಂದ 2023ರ ವರೆಗಿನ ಎಲ್ಲಾ 50:50 ಸೈಟುಗಳನ್ನ ರದ್ದುಪಡಿಸಲಾಗಿದೆ. 1,000 ಕ್ಕೂ ಹೆಚ್ಚು ಸೈಟುಗಳನ್ನ ರದ್ದುಮಾಡಲಾಗಿದೆ ಸದ್ಯಕ್ಕೆ ಎಲ್ಲವನ್ನೂ ರದ್ದು ಮಾಡಲಾಗಿದೆ. ಕಾನೂನಾತ್ಮಕ ಹೋರಾಟ ಇರುವ ಸೈಟುಗಳ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲಿ ಅಕ್ರಮಗಳಾಗಿದ್ದರೇ ಅವನ್ನೂ ರದ್ದು ಮಾಡುತ್ತೇವೆ. ರಸ್ತೆಗೆ ತಮ್ಮ ಜಮೀನು ಕೊಟ್ಟು ಪರಿಹಾರ ಪಡೆದವರು ಕೂಡ ನಿವೇಶನ ಪಡೆದಿದ್ದಾರೆ. ಸಾಕಷ್ಟು ಅಕ್ರಮ ನಡೆದಿದೆ, ಹೀಗಾಗಿ ಎಲ್ಲವನ್ನೂ ರದ್ದು ಮಾಡಿದ್ದೇವೆಮುಡಾ ದಿಂದ 50:50 ಅನುಪಾತದಲ್ಲಿ ಸೈಟು ಪಡೆದ ಗ್ರಾಹಕರಿಗೆ ಶಾಕ್ ಕೊಟ್ಟಿದ್ದಾರೆ.ಸಂಪೂರ್ಣ ಆದೇಶವನ್ನ ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದೇಶ ಜಾರಿ ಮಾಡುವ ಕೆಲಸದಲ್ಲಿ ಅಧಿಕಾರಿಗಳು ಇದ್ದಾರೆ. 2018 ರ ಹಿಂದೆ ಸೈಟು ಪಡೆದಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಎಂದು ತಿಳಿಸಿದ್ದಾರೆ.
ಇನ್ನೂ ಸಚಿವ ನಾಗೇಂದ್ರ ವಿಚಾರವಾಗಿ ಮಾತನಾಡಿ, ನಾಗೇಂದ್ರ ಅವರ ವಿಚಾರದಲ್ಲಿ ಸಿಎಂ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಬಿಜೆಪಿ ಪ್ರತಿಭಟನೆ ಮಾಡುವುದು ಬಿಟ್ಟು ಸದನದಲ್ಲಿ ಚರ್ಚೆ ಮಾಡಬಹುದಿತ್ತುಸಚಿವ ನಾಗೇಂದ್ರ ಯಾವ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಬಿಜೆಪಿಯವರು ಚರ್ಚೆಗೆ ಬರಬೇಕಿತ್ತು. ಬಿಜೆಪಿಯವರು ಗದ್ದಲ ಮಾಡಿ ಅಧಿವೇಶನ ಕೆಡಿಸಿದರು ಎಂದು ಹೇಳಿದರು.





